Ezekiel 33:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ತುತ್ತೂರಿಯ ಶಘ್ದ ಕೇಳಿದನು. ಆದರೆ ಅದನ್ನು ಅಲಕ್ಷಿಸಿದನು. ಆದ್ದರಿಂದ ಅವನ ಮರಣಕ್ಕೆ ಅವನೇ ಕಾರಣನು. ಅವನು ಆ ಎಚ್ಚರಿಕೆಯ ಶಘ್ದಕ್ಕೆ ಗಮನವನ್ನು ಕೊಟ್ಟಿದ್ದರೆ ಅವನು ಬಂದುಕುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ; ತನ್ನ ಮರಣಕ್ಕೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
Kannada BSI Bible 2016
ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲವಷ್ಟೆ; ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.
Kannada Bible (KNCL) BSI 2016
ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.