Ezekiel 33:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದೆ ಹೋದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ, ಕೊಂಬನ್ನೂದದೆ, ಸ್ವಜನರನ್ನು ಎಚ್ಚರಿಸದೆ ಇದ್ದರೆ, ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಕಾವಲುಗಾರನನ್ನೇ ಹೊಣೆಮಾಡುವೆನು.’
Kannada BSI Bible 2016
ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕಾವಲುಗಾರನು ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ ಸ್ವಜನರನ್ನು ಎಚ್ಚರಿಸದೆ ಇರುವಲ್ಲಿ ಖಡ್ಗವು ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ ಹೊಣೆಯಾದ ಕಾವಲುಗಾರನಿಗೆ ಮುಯ್ಯಿತೀರಿಸುವೆನು.
Kannada Bible (KNCL) BSI 2016
ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’