Ezekiel 33:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಗ, ನರಪುತ್ರನೇ, ನಾನು ನಿನ್ನನ್ನು ಇಸ್ರೇಲಿನ ಕಾವಲುಗಾರನನ್ನಾಗಿ ಆರಿಸಿದ್ದೇನೆ. ನನ್ನ ಬಾಯಿಂದ ನೀನು ಸಂದೇಶವನ್ನು ಕೇಳಿದಾಗ, ನನ್ನ ಪರವಾಗಿ ನೀನು ಜನರನ್ನು ಎಚ್ಚರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದುದರಿಂದ ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಿಸು.
Kannada BSI Bible 2016
ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರಿಗೆ ಕಾವಲುಗಾರನನ್ನಾಗಿ ನೇವಿುಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.
Kannada Bible (KNCL) BSI 2016
“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.