Ezekiel 33:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀನು ಅವನನ್ನು ಎಚ್ಚರಿಸಿ, ಅವನ ಜೀವಿತವನ್ನು ಘದಲಾಯಿಸಲು ಹೇಳಿ, ಪಾಪವನ್ನು ಮಾಡಬೇಡ ಎಂದು ಹೇಳಿದರೂ ಅವನು ಕೇಳದೆ ಹೋದರೆ ಪಾಪ ಮಾಡುವದನ್ನು ಬಿಡದೆ ಹೋದರೆ ಅವನು ಪಾಪ ಮಾಡಿದುದರಿಂದ ಸಾಯುವನು. ಆದರೆ ನೀನು ಅವನ ಮರಣಕ್ಕೆ ಕಾರಣನಾಗುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.
Kannada BSI Bible 2016
ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀನು ದುಷ್ಟನನ್ನು ದುರ್ಮಾಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Kannada Bible (KNCL) BSI 2016
ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.