Ezekiel 34:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೇಳುವುದೇನೆಂದರೆ, “ನಾನು ಆ ಕುರುಬರಿಗೆ ವಿರುದ್ಧವಾಗಿದ್ದೇನೆ. ಅವರ ಕೈಯಿಂದ ನನ್ನ ಕುರಿಗಳ ಬಗ್ಗೆ ವಿಚಾರಿಸುವೆನು. ನಾನು ಅವರನ್ನು ತೊಲಗಿಸಿ ಬಿಡುವೆನು. ಇನ್ನು ಮುಂದೆ ಅವರು ನನ್ನ ಕುರುಬರಾಗಿರುವುದಿಲ್ಲ. ಇನ್ನು ಅವರಿಗೆ ತಮ್ಮ ಹೊಟ್ಟೆ ತುಂಬಿಸಿಕೊಳ್ಳಲು ಸಾಧ್ಯವಿಲ್ಲ. ನನ್ನ ಕುರಿಗಳನ್ನು ಅವರ ಬಾಯಿಂದ ತಪ್ಪಿಸುವೆನು. ಆಗ ನನ್ನ ಕುರಿಗಳು ಅವರಿಗೆ ಆಹಾರವಾಗುವುದಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಗಳನ್ನು ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಿಲ್ಲ; ನನ್ನ ಕುರಿಗಳು ಆಹಾರವಾಗಿ, ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.”
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನನ್ನ ಜೀವದಾಣೆ, ನಾನು ಕುರುಬರಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.