Ezekiel 34:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಮಂದೆಯೇ, ನಾನು ಒಂದೊಂದು ಕುರಿಗಳ ನ್ಯಾಯತೀರಿಸುತ್ತೇನೆ. ಟಗರುಗಳನ್ನೂ ಹೋತಗಳನ್ನೂ ನ್ಯಾಯವಿಚಾರಣೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ, ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.
Kannada BSI Bible 2016
ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿ ಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯತೀರಿಸುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.