Ezekiel 34:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನಾದ ನಾನು ಅವರಿಗೆ ದೇವರಾಗಿರುವೆನು. ನನ್ನ ಸೇವಕನಾದ ದಾವೀದನು ಅವರೊಂದಿಗೆ ವಾಸಿಸುತ್ತಾ ಅವರನ್ನು ಆಳುವನು. ಇದು ಯೆಹೋವನಾದ ನನ್ನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಅರಸನಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.
Kannada BSI Bible 2016
ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಯೆಹೋವನಾದ ನಾನೇ ಇದನ್ನು ನುಡಿದಿದ್ದೇನೆ.
Kannada Bible (KNCL) BSI 2016
ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.