Ezekiel 34:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ನನ್ನ ಕುರಿಗಳೊಂದಿಗೆ ಸಮಾಧಾನದ ಒಡಂಘಡಿಕೆಯನ್ನು ಮಾಡುವೆನು. ಕೆಟ್ಟ ಕುರಿಗಳನ್ನು ನಾನು ದೇಶದೊಳಗಿಂದ ತೆಗೆದುಬಿಡುವೆನು. ಆಮೇಲೆ ನನ್ನ ಕುರಿಗಳು ಅಡವಿಯಲ್ಲಿ ಸುರಕ್ಷಿತವಾಗಿದ್ದು ಕಾಡುಗಳಲ್ಲಿ ಮಲಗಿಕೊಳ್ಳುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
Kannada BSI Bible 2016
ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
Kannada Bible (KNCL) BSI 2016
ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.