Ezekiel 34:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಕುರಿಗಳನ್ನೂ ನನ್ನ ಬೆಟ್ಟದ ಸುತ್ತಲೂ ಇರುವ ಸ್ಥಳಗಳನ್ನೂ ಆಶೀರ್ವದಿಸುವೆನು. ಸರಿಯಾದ ಸಮಯಕ್ಕೆ ಮಳೆ ಬೀಳುವಂತೆ ಮಾಡುವೆನು. ಮತ್ತು ಅದನ್ನು ಆಶೀರ್ವಾದದ ಸುರಿಮಳೆಯಂತೆ ಸುರಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.
Kannada BSI Bible 2016
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.
Kannada Bible (KNCL) BSI 2016
ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.