Ezekiel 34:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೊಲದಲ್ಲಿ ಬೆಳೆಯುವ ಮರಗಳು ಫಲವನ್ನಿಯುವವು. ಭೂಮಿಯು ಬೆಳೆಯನ್ನು ಕೊಡುವದು. ಆಗ ಕುರಿಗಳು ಅವರ ದೇಶದಲ್ಲಿ ಸುರಕ್ಷಿತವಾಗಿರುವವು. ಅವರ ಮೇಲಿರುವ ನೊಗಗಳನ್ನು ನಾನು ಮುರಿದುಬಿಡುವೆನು. ಅವರನ್ನು ಗುಲಾಮರನ್ನಾಗಿ ಮಾಡಿದ ದೇಶದವರ ಶಕ್ತಿಯನ್ನೆ ಮುರಿಯುವೆನು. ನಾನು ಯೆಹೋವನೆಂದು ಆಗ ಅವರಿಗೆ ತಿಳಿಯುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೋಟದ ಮರಗಳು ಹಣ್ಣುಬಿಡುವುದು; ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುದು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಬಂಧನಗಳನ್ನು ಮುರಿದು ಹಾಕಿ, ಅವರನ್ನು ದಾಸರಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವುದು.
Kannada BSI Bible 2016
ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;
Kannada BSI JV (ಕನ್ನಡ ಸತ್ಯವೇದವು J.V. (BSI))
ತೋಟದ ಮರಗಳು ಹಣ್ಣುಬಿಡುವವು; ಹೊಲಗಳು ಒಳ್ಳೆಯ ಬೆಳೆಕೊಡುವವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗದ ಗೂಟಗಳನ್ನು ನಾನು ಮುರಿದುಹಾಕಿ ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ ನಾನೇ ಯೆಹೋವನು ಎಂದು ಅವರಿಗೆ ದೃಢವಾಗುವದು.
Kannada Bible (KNCL) BSI 2016
ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.