Ezekiel 34:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೇರೆ ದೇಶಗಳು ಅವರನ್ನು ಪ್ರಾಣಿಗಳನ್ನು ಹಿಡಿಯುವಂತೆ ಇನ್ನು ಹಿಡಿಯುವದಿಲ್ಲ. ಅವರು ಅವುಗಳನ್ನು ಇನ್ನು ಮುಂದಕ್ಕೆ ತಿನ್ನುವದಿಲ್ಲ. ಅವರು ಸುರಕ್ಷಿತವಾಗಿ ಜೀವಿಸುವರು. ಯಾರೂ ಅವರನ್ನು ಇನ್ನು ಹೆದರಿಸುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡುವುದಿಲ್ಲ, ಕಾಡು ಮೃಗಗಳು ಅವರನ್ನು ತಿನ್ನುವುದಿಲ್ಲ; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.
Kannada BSI Bible 2016
ಅವರು ಇನ್ನು ಮೇಲೆ ಅನ್ಯಜನಾಂಗಗಳಿಗೆ ಕೊಳ್ಳೆಯಾಗು ವದಿಲ್ಲ; ಭೂಮಿಯ ಮೃಗಗಳು ಅವರನ್ನು ತಿನ್ನುವದಿಲ್ಲ; ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯ ವಾಗಿ ವಾಸಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.
Kannada Bible (KNCL) BSI 2016
ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.