Ezekiel 34:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರಿಗೆ ಭೂಮಿಯನ್ನು ಕೊಡುವೆನು. ಅದರಲ್ಲಿ ಅವರು ತೋಟವನ್ನು ಮಾಡುವರು. ಆ ನಾಡಿನಲ್ಲಿ ಅವರು ಇನ್ನೆಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನ್ನು ಮುಂದೆ ಅವಮಾನ ಹೊಂದುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡುವುದಿಲ್ಲ, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗುವುದಿಲ್ಲ.
Kannada BSI Bible 2016
ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ದೇಶವನ್ನು ಇನ್ನು ಹಾಳುಮಾಡದು, ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.
Kannada Bible (KNCL) BSI 2016
ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.