Ezekiel 34:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನೀವು ಘಲಹೀನ ಕುರಿಗಳನ್ನು ಘಲಪಡಿಸಲಿಲ್ಲ. ಕಾಯಿಲೆಯಲ್ಲಿರುವ ಕುರಿಗಳನ್ನು ನೀವು ಪರಾಂಬರಿಸಲಿಲ್ಲ. ಗಾಯಗೊಂಡ ಕುರಿಗಳಿಗೆ ಬಟ್ಟೆ ಸುತ್ತಲಿಲ್ಲ. ಕೆಲವು ಕುರಿಗಳು ದಾರಿತಪ್ಪಿ ದೂರ ಹೋದವು. ಆದರೆ ನೀವು ಅದರ ಬೆನ್ನ ಹಿಂದೆ ಹೋಗಿ ಹಿಂತಿರುಗಿ ಬರುವಂತೆ ಮಾಡಲಿಲ್ಲ. ತಪ್ಪಿಹೋದ ಕುರಿಗಳನ್ನು ನೀವು ಹುಡುಕಲಿಲ್ಲ. ನೀವು ಘಹಳ ಕ್ರೂರಿಗಳೂ ದಯೆ ಇಲ್ಲದವರೂ ಆಗಿದ್ದೀರಿ. ಆ ರೀತಿಯಾಗಿ ನೀವು ನಿಮ್ಮ ಕುರಿಗಳನ್ನು ನಡೆಸಿದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
Kannada BSI Bible 2016
ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾ, ನೀವು ದುರ್ಬಲವಾದವುಗಳನ್ನು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ಓಡಿಸಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.
Kannada Bible (KNCL) BSI 2016
ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.