Ezekiel 35:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸಬಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
Kannada BSI Bible 2016
ಕರ್ತನು ಅವುಗಳಲ್ಲಿರುವದರಿಂದ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನವಾಗು ವವು. ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು - ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವವು, ನಾವು ಅವುಗಳನ್ನು ಅನುಭವಿಸುವೆವು ಅಂದುಕೊಂಡು ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯ ಮಾಡಿದ್ದರಿಂದ ನನ್ನ ಜೀವದಾಣೆ,
Kannada Bible (KNCL) BSI 2016
“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.