Ezekiel 35:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ನಿನ್ನ ಎಲ್ಲಾ ತುಚ್ಛಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವಿ. ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನೆಐಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
Kannada BSI Bible 2016
ಆಗ ನಾನೇ ಕರ್ತನೆಂದು ನೀನು ತಿಳಿಯುವಿ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ--ಅವು ಹಾಳಾಗಿವೆ ನಮಗೆ ಆಹಾರವಾಗಿ ಕೊಡಲ್ಪಟ್ಟಿವೆ ಎಂದು ಹೇಳಿ ಮಾತ ನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಕೇಳಿರುವೆನೆಂದು ತಿಳಿಯುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ - ಆಹಾ, ಹಾಳಾದವು, ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬದು ನಿನಗೆ ಗೊತ್ತಾಗುವದು.
Kannada Bible (KNCL) BSI 2016
ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.