Ezekiel 35:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನ ನುಡಿ ಇದು: “ಪ್ರಪಂಚದ ಎಲ್ಲಾ ದೇಶಗಳು ನಾನು ನಿನ್ನನ್ನು ನಾಶಮಾಡುವಾಗ ಸಂತೋಷಿಸುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ಹಾಳುಮಾಡಿ, ಲೋಕವನ್ನೆಲ್ಲಾ ಸಂತೋಷಪಡಿಸುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ಹಾಳುಮಾಡಿ ಲೋಕವನ್ನೆಲ್ಲಾ ಸಂತೋಷಪಡಿಸುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.