Ezekiel 35:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವಿ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವಿ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರ ಸ್ವತ್ತಿನ ನಾಶಕ್ಕೆ ನೀನು ಹೇಗೆ ಸಂತೋಷಪಟ್ಟೆಯೋ ಹಾಗೆಯೇ, ನಿನ್ನ ನಾಶಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ಸಂಪೂರ್ಣವಾಗಿ ಹಾಳಾಗುವುದು, ಆಗ ನಾನೇ ಯೆಹೋವನು ಎಂದು ನಿಮಗೆ ತಿಳಿಯುವುದು.”
Kannada BSI Bible 2016
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್‌ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.
Kannada Bible (KNCL) BSI 2016
ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”