Ezekiel 35:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಘಂಜರು ಭೂಮಿಯನ್ನಾಗಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.
Kannada BSI Bible 2016
ಅದಕ್ಕೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಸೇಯಾರ್‌ ಪರ್ವತವೇ, ನಾನು ನಿನಗೆ ವಿರುದ್ಧವಾಗಿ ದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.
Kannada Bible (KNCL) BSI 2016
ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.