Ezekiel 35:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿಮ್ಮನ್ನು ಮರಣವು ನುಂಗಿಬಿಡುವಂತೆ ಮಾಡುವೆನು. ಮರಣವು ನಿಮ್ಮನ್ನು ಹಿಂಬಾಲಿಸುವುದು. ನೀನು ಜನರನ್ನು ಕೊಲ್ಲಲು ಹಿಂಜರಿಯಲಿಲ್ಲ. ಆದ್ದರಿಂದ ಮರಣವು ನಿನ್ನನ್ನು ಓಡಿಸುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು’” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಆದದರಿಂದ ದೇವರಾದ ಕರ್ತನು ಹೇಳುತ್ತಾನೆ-- ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು; ರಕ್ತದ ಕೋಡಿಯು ನಿನ್ನನ್ನು ಬೆನ್ನಟ್ಟು ವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದ ಕಾರಣ ರಕ್ತಪ್ರವಾಹವೇ ನಿನ್ನ ಬೆನ್ನು ಹತ್ತುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು, ರಕ್ತದ ಕೋಡಿಯು ನಿನ್ನನ್ನು ಹಿಂದಟ್ಟುವದು; ನೀನು ರಕ್ತಸುರಿಸುವದಕ್ಕೆ ಹೇಸದೆ ಹೋದಕಾರಣ ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವದು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.