Ezekiel 36:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ನನ್ನ ಪರವಾಗಿ ಇಸ್ರೇಲಿನ ಪರ್ವತದೊಂದಿಗೆ ಮಾತನಾಡು. ಅವುಗಳಿಗೆ ಯೆಹೋವನ ಮಾತುಗಳನ್ನು ಕೇಳಲು ಹೇಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.
Kannada BSI Bible 2016
ಅಲ್ಲದೆ ಮನುಷ್ಯಪುತ್ರನೇ, ಇಸ್ರಾಯೇಲ್‌ ಪರ್ವತಗಳ ಕಡೆಗೆ ಪ್ರವಾದಿಸು ಮತ್ತು ಹೇಳು--ಇಸ್ರಾಯೇಲ್‌ ಪರ್ವತಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ - ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.
Kannada Bible (KNCL) BSI 2016
“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.