Ezekiel 36:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನಲ್ಲಿ ಅನೇಕಾನೇಕ ಮಂದಿ ವಾಸಿಸುವರು. ಇಡೀ ಇಸ್ರೇಲ್ ಜನಾಂಗದವರು ಅಲ್ಲಿ ವಾಸಮಾಡುವರು. ಪಟ್ಟಣಗಳು ಜನಭರಿತವಾಗುವವು. ಹಾಳಾದ ಸ್ಥಳಗಳೆಲ್ಲಾ ತಿರುಗಿ ಕಟ್ಟಲ್ಪಡುವವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಬಹು ಜನರು ಅಂದರೆ ಇಸ್ರಾಯೇಲ್ ವಂಶದವರೆಲ್ಲರೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
Kannada BSI Bible 2016
ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು;
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಬಹುಜನರು ಅಂದರೆ ಇಸ್ರಾಯೇಲ್ ವಂಶವೆಲ್ಲವೂ ವಾಸಿಸುವಂತೆ ಮಾಡುವೆನು; ಪಟ್ಟಣಗಳು ಜನಭರಿತವಾಗುವವು, ಹಾಳುನಿವೇಶನಗಳಲ್ಲಿ ಕಟ್ಟಡಗಳು ಏಳುವವು;
Kannada Bible (KNCL) BSI 2016
ನಿಮ್ಮ ಹೊಲಗಳನ್ನು ಉಳುಮೆಮಾಡಿ ಬಿತ್ತುವರು; ನಿಮ್ಮಲ್ಲಿ ಬಹುಜನರು ಅಂದರೆ, ಇಸ್ರಯೇಲ್ ವಂಶವೆಲ್ಲವೂ ವಾಸಿಸುವಂತೆಮಾಡುವೆನು; ಪಟ್ಟಣಗಳು ಜನಭರಿತವಾಗುವುವು, ಹಾಳುನಿವೇಶನಗಳಲ್ಲಿ ಕಟ್ಟಡಗಳು, ಏಳುವುವು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.