Ezekiel 36:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನಿನಗೆ ಅನೇಕ ಜನರನ್ನೂ ಪ್ರಾಣಿಗಳನ್ನೂ ಕೊಡುವೆನು. ಪ್ರಾಣಿಗಳು ವೃದ್ಧಿಯಾಗುವವು ಮತ್ತು ಜನರು ಹೆಚ್ಚು ಮಕ್ಕಳನ್ನು ಪಡೆಯುವರು. ಹಿಂದಿನ ಕಾಲದಲ್ಲಿ ನಿನ್ನ ದೇಶ ಜನಭರಿತವಾಗಿದ್ದಂತೆ ಈಗಲೂ ಆಗುವ ಹಾಗೆ ನಾನು ಜನರನ್ನು ತರಿಸುವೆನು. ನಿನ್ನ ದೇಶವು ಹಿಂದೆ ಇದ್ದುದಕ್ಕಿಂತಲೂ ಉತ್ತಮ ದೇಶವನ್ನಾಗಿ ಮಾಡುವೆನು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಬಹು ಜನರನ್ನೂ, ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
Kannada BSI Bible 2016
ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಅಭಿವೃದ್ಧಿಯಾಗುವವು; ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ ಮೊದಲಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.
Kannada Bible (KNCL) BSI 2016
ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.