Ezekiel 36:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೇಳಿದ ಮಾತುಗಳಿವು, “ಇಸ್ರೇಲ್ ದೇಶವೇ, ಜನರು ನಿನ್ನ ವಿಷಯದಲ್ಲಿ ಕೆಟ್ಟ ಮಾತುಗಳನ್ನು ಆಡುತ್ತಾರೆ. ನೀನು ನಿನ್ನ ಜನರನ್ನು ನಾಶ ಮಾಡಿದಿ ಎಂದು ಹೇಳುತ್ತಾರೆ. ನಿನ್ನ ಮಕ್ಕಳನ್ನು ನೀನೇ ತೆಗೆದುಹಾಕಿದಿ ಎಂದು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ” ಎಂದು ನಿನ್ನನ್ನು ಬಯ್ಯುತ್ತಾರೆ.
Kannada BSI Bible 2016
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ, ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲ ದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವಿ ಎಂದು ಅವರು ನಿನಗೆ ಹೇಳುವರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ ಎಂದು ನಿನ್ನನ್ನು ಬಯ್ಯುತ್ತಾರಲ್ಲಾ;
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ ‘ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿರುವೆ’ ಎಂದು ನಿನ್ನನ್ನು ಬಯ್ಯುತ್ತಾರಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವೆ,” ಎಂದು ಅವರು ನಿನಗೆ ಹೇಳುವರು.