Ezekiel 36:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಾನು ಆ ಜನಾಂಗಗಳು ಇನ್ನು ಮೇಲೆ ನಿನ್ನನ್ನು ತುಚ್ಛೀಕರಿಸಲು ಬಿಡುವದಿಲ್ಲ. ಅವರ ಮಾತುಗಳಿಂದ ಇನ್ನು ನೀನು ಙೇಸರಪಟ್ಟುಕೊಳ್ಳಲಾರೆ. ನಿನ್ನ ಜನರಿಂದ ಮಕ್ಕಳನ್ನು ಕಿತ್ತುಕೊಳ್ಳಲಾರೆ.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅಲ್ಲದೆ ಇನ್ನು ಮೇಲೆ ನೀನು ಅನ್ಯ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗದವರಿಂದ ತಿರಸ್ಕರಿಸಲ್ಪಡುವದಿಲ್ಲ; ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮ್ಲೇಚ್ಫರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವಿ; ನಿನ್ನ ಪ್ರಜೆಯು ಮುಗ್ಗರಿಸುವದಕ್ಕೆ ಇನ್ನು ನೀನು ಕಾರಣನಾಗುವದಿಲ್ಲ; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”