Ezekiel 36:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನರಪುತ್ರನೇ, ಇಸ್ರೇಲ್ ಜನಾಂಗವು ತನ್ನ ಸಬದೇಶದಲ್ಲಿ ವಾಸಿಸಿತು. ಆದರೆ ಅವರು ನಡೆಸಿದ ದುಷ್ಟತನದಿಂದ ದೇಶವನ್ನು ಮುಟ್ಟಾದ ಸ್ತ್ರೀಯಂತೆ ಅಶುದ್ಧಗೊಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.
Kannada BSI Bible 2016
ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲ್ಯರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧ ಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಹೊಲೆಗೈದರು; ಅವರ ನಡತೆಯು ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.
Kannada Bible (KNCL) BSI 2016
“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.