Ezekiel 36:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ ಎಂದು ಅವುಗಳಿಗೆ ಹೇಳು. ‘ವೈರಿಗಳು ನಿನಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನಾಡಿದ್ದಾರೆ. ಒಳ್ಳೆಯದಾಯಿತು. ಈಗ ಪುರಾತನ ಪರ್ವತಗಳು ನಮ್ಮದಾದವು ಎಂದು ಹೇಳುತ್ತಾರೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ಶತ್ರುವು ನಿಮ್ಮನ್ನು ನೋಡಿ, “ಆಹಾ!” ಎನ್ನುತ್ತಾ, ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’” ಎಂದು ಹೇಳುವರು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾಕಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ ಆಹಾ, ಪೂರ್ವದ ಉತ್ತಮ ಸ್ಥಳಗಳು ನಮಗೆ ಸ್ವಾಸ್ತ್ಯವಾದವು ಎಂದು ಹೇಳುವರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಶತ್ರುವು ನಿಮ್ಮನ್ನು ನೋಡಿ ಆಹಾ, ಎನ್ನುತ್ತಾ ಈ ಪುರಾತನದುರ್ಗಗಳು ನಮ್ಮ ವಶವಾಗಿವೆ ಎಂದು ಹಿಗ್ಗಿಕೊಂಡದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಕರ್ತನಾದ ಯೆಹೋವನ ಅಪ್ಪಣೆಯಾಯಿತು -
Kannada Bible (KNCL) BSI 2016
ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’