Ezekiel 36:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇಶಗಳಲ್ಲಿರುವಾಗಲೂ ಅವರು ನನ್ನ ಹೆಸರಿಗೆ ಅಪಕೀರ್ತಿ ತಂದರು. ಹೇಗೆ? ‘ಇವರು ಯೆಹೋವನ ಜನರು. ಆತನು ಕೊಟ್ಟ ದೇಶವನ್ನು ಇವರು ತೊರೆದರು.’ ಎಂದು ಆ ದೇಶದ ಜನರು ಅನ್ನುವಂತೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದು ಅವರಿಗೆ ಹೇಳಿ, ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡುವರು.
Kannada BSI Bible 2016
ಅವರು ಆ ಅನ್ಯಜನಾಂಗಗಳೊಳಗೆ ಸೇರಿಕೊಂಡ ಮೇಲೆ--ಇವರೇ ಕರ್ತನ ಜನರು ಮತ್ತು ಇವರು ಆತನ ದೇಶದಿಂದ ಹೊರಟುಹೋದರು ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಓಹೋ, ಇವರು ಯೆಹೋವನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ ಎಂದೆನ್ನಿಸಿಕೊಂಡು ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತರಲು
Kannada Bible (KNCL) BSI 2016
ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.