Ezekiel 36:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಇಸ್ರೇಲರಿಗೆ ಹೀಗೆ ಹೇಳು: ‘ಇಸ್ರೇಲರೇ, ನೀವು ಹೋದ ಕಡೆಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದ್ದೀರಿ. ನಾನು ಇದನ್ನು ನಿಲ್ಲಿಸುವುದಕ್ಕೆ ಎನುಙೇಕಾದರೂ ಮಾಡುತ್ತೇನೆ. ಇಸ್ರೇಲೇ, ನಾನು ಈ ಕಾರ್ಯವನ್ನು ನಿನ್ನ ಹೆಸರಿಗೋಸ್ಕರ ಮಾಡದೆ ನನ್ನ ಪರಿಶುದ್ಧ ಹೆಸರಿನ ನಿಮಿತ್ತ ನಾನು ಮಾಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿಮಿತ್ತವೇ ಈ ರಕ್ಷಣ ಕಾರ್ಯವನ್ನು ಮಾಡುತ್ತೇನೆ.
Kannada BSI Bible 2016
ಆದದರಿಂದ ನೀನು ಇಸ್ರಾ ಯೇಲನ ಮನೆತನದವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು--ಓ ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡು ತ್ತಿಲ್ಲ, ಆದರೆ ನೀವು ಹೋಗುವಾಗ ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಪರಿಶುದ್ಧನಾಮಕ್ಕಾಗಿ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿವಿುತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮದ ನಿವಿುತ್ತವೇ ಈ ರಕ್ಷಣಕಾರ್ಯವನ್ನು ಮಾಡುತ್ತೇನೆ.
Kannada Bible (KNCL) BSI 2016
“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.