Ezekiel 36:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಹೆಸರು ಅತ್ಯಂತ ಪವಿತ್ರವಾದದ್ದು ಎಂದು ನಾನು ಅವರಿಗೆ ತೋರಿಸುವೆನು. ನನ್ನ ಪವಿತ್ರ ನಾಮವನ್ನು ಆ ದೇಶಗಳಲ್ಲಿ ಅವಮಾನಪಡಿಸಿದಿರಿ. ಆದರೆ ನಾನು ಪವಿತ್ರನೆಂದು ನಿಮಗೆ ತೋರಿಸುತ್ತೇನೆ. ನನ್ನ ನಾಮವನ್ನು ಗೌರವಿಸಲು ನಾನು ನಿಮಗೆ ಕಲಿಸುವೆನು. ಆಗ ಆ ದೇಶದವರಿಗೆ ನಾನು ಯೆಹೋವನು ಎಂದು ಗೊತ್ತಾಗುವದು.”‘ ನನ್ನ ಒಡೆಯನಾದ ಯೆಹೋವನ ನುಡಿಗಳಿವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ನೀವು ಅನ್ಯಜನಾಂಗಗಳ ಮಧ್ಯೆ ಅಪವಿತ್ರಪಡಿಸಿದ ನನ್ನ ಮಹತ್ತರ ನಾಮವನ್ನು ನಾನು ಪರಿಶುದ್ಧಮಾಡುವೆನು; ಹಾಗೆ ನಾನು ಅವರ ಕಣ್ಣುಗಳ ಮುಂದೆ ನಿಮ್ಮಲ್ಲಿ ಪರಿಶುದ್ಧನಾದ ಮೇಲೆ ಆ ಅನ್ಯ ಜನಾಂಗಗಳವರು ನಾನೇ ಕರ್ತನೆಂದು ತಿಳಿಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.