Ezekiel 36:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಮರಗಳಿಂದ ಯಥೇಚ್ಛವಾಗಿ ಹಣ್ಣು ದೊರಕುವಂತೆ ಮಾಡುವೆನು. ಹೊಲಗಳು ಒಳ್ಳೆಯ ಬೆಳೆಗಳನ್ನು ಕೊಡುವಂತೆ ಮಾಡಿ ನೀವು ಅನ್ಯದೇಶದಲ್ಲಿ ಹಸಿವಿನಿಂದ ನರಳುವ ದಿವಸಗಳು ತಿರುಗಿ ಬಾರದಂತೆ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
Kannada BSI Bible 2016
ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕ್ಷಾಮದೇಶದವರೆಂದು ಜನಾಂಗಗಳು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
Kannada Bible (KNCL) BSI 2016
ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.