Ezekiel 36:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀವು ಇದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ನಾನು ಈ ಕಾರ್ಯಗಳನ್ನು ನಿಮಗಾಗಿ ಮಾಡದೆ ನನ್ನ ನಾಮದ ಘನತೆಗಾಗಿ ಮಾಡುತ್ತಿದ್ದೇನೆ. ಇಸ್ರೇಲ್ ಜನರೇ, ನಿಮ್ಮ ಜೀವಿತದ ಕುರಿತಾಗಿ ನೀವು ನಾಚಿಕೆಯಿಂದ ವ್ಯಸನಪಡುವವರಾಗಿರಙೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಈ ರಕ್ಷಣ ಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲ ಎಂಬುದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.”
Kannada BSI Bible 2016
ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಈ ರಕ್ಷಣಕಾರ್ಯವನ್ನು ಮಾಡುವದು ನಿಮ್ಮ ನಿವಿುತ್ತವಲ್ಲವೆಂದು ನಿಮಗೆ ತಿಳಿದಿರಲಿ; ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗೆ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.