Ezekiel 36:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
Kannada BSI Bible 2016
ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸು ವೆನು; ಹಾಳಾಗಿರುವ ಸ್ಥಳಗಳೂ ಸಹ ಕಟ್ಟಲ್ಪಡುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು.