Ezekiel 36:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಹಿಂದಿನ ಕಾಲದಲ್ಲಿ ದೇಶವು ಹಾಳಾಗಿ ಹೋಗಿತ್ತು. ಈಗ ಇದು ಏದೆನ್ ತೋಟದಂತಿದೆ. ಪಟ್ಟಣಗಳು ನಾಶವಾಗಿದ್ದವು, ಬರಿದಾಗಿದ್ದವು. ಈಗಲಾದರೋ ಅವು ಸುರಕ್ಷಿತವಾಗಿದ್ದು ಜನಭರಿತವಾಗಿವೆ’“ ಎಂದು ಜನರು ಅನ್ನುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಜನರು, ‘ಹಾಳಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ, ಜನಭರಿತವಾಗಿದೆ’ ಎಂದು ಹೇಳುವರು.
Kannada BSI Bible 2016
ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿ ಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ ಎಂದು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಜನರು - ಕಾಡಾಗಿದ್ದ ಈ ದೇಶವು ಏದೆನ್ ಉದ್ಯಾನದಂತೆ ಕಳಕಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ ಎಂದು ಹೇಳುವರು.
Kannada Bible (KNCL) BSI 2016
ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.