Ezekiel 36:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲ್ ಜನರು ನನ್ನ ಬಳಿಗೆ ಬಂದು ಹೀಗೆ ಮಾಡಙೇಕೆಂದು ನನ್ನನ್ನು ಕೇಳಿಕೊಳ್ಳಲು ಅವಕಾಶ ಕೊಡುವೆನು. ನಾನು ಅವರನ್ನು ಅಭಿವೃದ್ಧಿಪಡಿಸಿ ಅವರ ಸಂಖ್ಯೆಯನ್ನು ಕುರಿಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.