Ezekiel 36:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಇಸ್ರೇಲಿನ ಪರ್ವತಗಳೇ, ನನ್ನ ಒಡೆಯನಾದ ಯೆಹೋವನ ಮಾತುಗಳಿಗೆ ಕಿವಿಗೊಡಿರಿ! ನನ್ನ ಒಡೆಯನಾದ ಯೆಹೋವನು ಬೆಟ್ಟಗುಡ್ಡಗಳಿಗೂ ತೊರೆಗಳಿಗೂ ಕಣಿವೆಗಳಿಗೂ ಪಾಳುಬಿದ್ದ ಸ್ಥಳಗಳಿಗೂ ಮತ್ತು ಅನ್ಯಜನರಿಂದ ಕೊಳ್ಳೆಹೊಡೆಯಲ್ಪಟ್ಟು ಅಪಹ್ಯಾಸಕ್ಕೆ ಒಳಗಾಗಿ ನಿರ್ಜನವಾಗಿರುವ ಪಟ್ಟಣಗಳಿಗೂ ಹೀಗೆನ್ನುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯವನ್ನು ಕೇಳಿರಿ, ಬೆಟ್ಟಗಳಿಗೂ, ಗುಡ್ಡಗಳಿಗೂ, ತೊರೆತಗ್ಗುಗಳಿಗೂ, ಹಾಳುಪ್ರದೇಶಗಳಿಗೂ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ,
Kannada BSI Bible 2016
ಆದ ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ದೇವ ರಾದ ಕರ್ತನ ವಾಕ್ಯವನ್ನು ಕೇಳಿರಿ--ಹೀಗೆ ಪರ್ವತ ಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಅನ್ಯಜನಾಂಗ ಗಳಲ್ಲಿ ಉಳಿದವರು ಕೊಳ್ಳೆಹೊಡೆದು ತೊರೆದು ಬಿಡುವ ಹಾಳು ಪಟ್ಟಣಗಳಿಗೂ ದೇವರಾದ ಕರ್ತನು ಹೇಳು ತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -
Kannada Bible (KNCL) BSI 2016
ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ