Ezekiel 37:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನ ಶಕ್ತಿಯು ನನ್ನ ಮೇಲೆ ಘಂದಿತು. ಯೆಹೋವನ ಆತ್ಮವು ನನ್ನನ್ನು ನಗರದೊಳಗಿಂದ ಎತ್ತಿಕೊಂಡು ತಗ್ಗಿನ ಮಧ್ಯಕ್ಕೆ ಕೊಂಡೊಯ್ದನು. ಆ ಬಯಲಿನ ತುಂಬಾ ಒಣಗಿದ ಎಲುಬುಗಳು ತುಂಬಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಲು, ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದನು.
Kannada BSI Bible 2016
ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ತನ್ನ ಆತ್ಮದ ಮೂಲಕ ನನ್ನನ್ನು ಒಯ್ದು ಎಲುಬುಗಳಿಂದ ತುಂಬಿದ್ದ ಒಂದು ತಗ್ಗಿನಲ್ಲಿ ಇಳಿಸಿ
Kannada Bible (KNCL) BSI 2016
ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.