Ezekiel 37:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಒಡೆಯನಾದ ಯೆಹೋವನು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಈ ಎಲುಬುಗಳು ಇಸ್ರೇಲ್ ಜನಾಂಗ. ‘ನಮ್ಮ ಎಲುಬುಗಳು ಒಣಗಿಹೋಗಿವೆ. ನಮ್ಮ ನಿರೀಕ್ಷೆಯು ಮುಗಿದುಹೋಯಿತು. ನಾವು ಸಂಪೂರ್ಣವಾಗಿ ನಾಶವಾಗಿ ಹೋಗಿದ್ದೇವೆ’ ಎಂದು ಇಸ್ರೇಲರು ಹೇಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಮನೆತನಗಳೇ; ಇಗೋ, ಆ ಮನೆತನದವರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಸಂಪೂರ್ಣವಾಗಿ ನಾಶವಾದೆವು’” ಅಂದುಕೊಳ್ಳುತ್ತಿದ್ದಾರೆ.
Kannada BSI Bible 2016
ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್‌ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಈ ಎಲುಬುಗಳು ಇಸ್ರಾಯೇಲಿನ ಪೂರ್ಣವಂಶವು; ಇಗೋ, ಆ ವಂಶೀಯರು - ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆಯು ಹಾಳಾಯಿತು; ನಾವು ಬುಡನಾಶವಾದೆವು ಅಂದುಕೊಳ್ಳುತ್ತಿದ್ದಾರೆ.
Kannada Bible (KNCL) BSI 2016
ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’