Ezekiel 37:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ನನ್ನ ಪರವಾಗಿ ಅವರೊಂದಿಗೆ ಮಾತನಾಡು. ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಹೇಳು: ‘ನನ್ನ ಜನರೇ, ನಾನು ನಿಮ್ಮ ಸಮಾಊಗಳನ್ನು ತೆರೆದು ನಿಮ್ಮನ್ನು ಹೊರತಂದು ನಿಮ್ಮ ಸಬದೇಶವಾದ ಇಸ್ರೇಲಿಗೆ ನಿಮ್ಮನ್ನು ಬರಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ನೀನು ಈ ಪ್ರವಾದನೆಯನ್ನು ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜನರೇ, ನೋಡಿರಿ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
Kannada BSI Bible 2016
ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜನರೇ, ನೋಡಿರಿ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ ಇಸ್ರಾಯೇಲ್ ದೇಶಕ್ಕೆ ಸೇರಮಾಡುವೆನು.
Kannada Bible (KNCL) BSI 2016
ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.