Ezekiel 37:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜನರೇ, ನಿಮ್ಮನ್ನು ಸಮಾಊಯೊಳಗಿಂದ ಎಬ್ಬಿಸಿ ತರುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವುದು.
Kannada BSI Bible 2016
ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ ನಾನೇ ಯೆಹೋವನು ಎಂದು ನಿಮಗೆ ದೃಢವಾಗುವದು.
Kannada Bible (KNCL) BSI 2016
ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.