Ezekiel 37:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನನ್ನ ಆತ್ಮವನ್ನು ನಿಮ್ಮಲ್ಲಿ ಇಡುವೆನು, ಆಗ ನೀವು ತಿರುಗಿ ಜೀವ ಹೊಂದುವಿರಿ. ಅನಂತರ ನಿಮ್ಮನ್ನು ನಿಮ್ಮ ಸಬದೇಶಕ್ಕೆ ಬರಮಾಡುವೆನು. ಆಗ ನಾನೇ ಯೆಹೋವನೆಂದು ನೀವು ತಿಳಿಯುವಿರಿ. ನಾನು ಹೇಳಿದ್ದೆಲ್ಲ ಸಂಭವಿಸುತ್ತದೆ ಎಂದು ಆಗ ನಿಮಗೆ ತಿಳಿದು ಬರುವದು.’“ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು, ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ” ಇದು ಯೆಹೋವನ ಸಂಕಲ್ಪ.
Kannada BSI Bible 2016
ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಹೊಗಿಸಿ ನಿಮ್ಮನ್ನು ಬದುಕಿಸಿ ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು; ಆಗ ಯೆಹೋವನಾದ ನಾನೇ ಇದನ್ನು ನುಡಿದು ನಡಿಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಯೆಹೋವನ ಸಂಕಲ್ಪ.
Kannada Bible (KNCL) BSI 2016
ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”