Ezekiel 37:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನರಪುತ್ರನೇ, ಒಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಈ ದಂಡವು ಯೆಹೂದನಿಗೂ ಅವನ ಸ್ನೇಹಿತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ. ಆಮೇಲೆ ಇನ್ನೊಂದು ದಂಡವನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯಿಮನ ಈ ದಂಡವು ಯೋಸೇಫನಿಗೂ ಅವನ ಸೆಐಹೀತರಾದ ಇಸ್ರೇಲರಿಗೂ ಸೇರಿದ್ದು’ ಎಂದು ಬರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನರಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು, ಅದರಲ್ಲಿ ಯೆಹೂದದ್ದು ಮತ್ತು ಯೆಹೂದಕ್ಕೆ ಸೇರಿದ ಇಸ್ರಾಯೇಲರದು ಎಂದು ಬರೆದು, ಇನ್ನೊಂದು ಕೋಲನ್ನು ತೆಗೆದುಕೊಂಡು ಅದರಲ್ಲಿ ಯೋಸೇಫಿನದು, ಎಫ್ರಾಯೀಮಿನದು, ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲರದು ಎಂದು ಬರೆ.
Kannada BSI Bible 2016
ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ - ಯೆಹೂದದ್ದು, ಯೆಹೂದಕ್ಕೆ ಸೇರಿದ ಇಸ್ರಾಯೇಲ್ಯರದು ಎಂದು ಬರೆದು ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ - ಯೋಸೇಫಿನದು, ಎಫ್ರಾಯೀವಿುನದು ಯೋಸೇಫಿಗೆ ಸೇರಿದ ಎಲ್ಲಾ ಇಸ್ರಾಯೇಲ್ಯರದು ಎಂದು ಬರೆ;
Kannada Bible (KNCL) BSI 2016
“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು.