Ezekiel 37:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆ ಹೇಳುತ್ತಾನೆ ಎಂದು ಆ ಜನರಿಗೆ ಹೇಳು: ‘ನಾನು ಇಸ್ರೇಲ್ ಜನರನ್ನು ಅವರು ಚದರಿದ ದೇಶಗಳಿಂದಲೂ ಸುತ್ತಲಿರುವ ದೇಶಗಳಿಂದಲೂ ಅವರನ್ನು ಒಟ್ಟುಗೂಡಿಸಿ ಅವರ ಸಬದೇಶಕ್ಕೆ ತರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನೂ ಅವರಿಗೆ ನುಡಿ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಗೋ, ಇಸ್ರಾಯೇಲ್ಯರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ ಎಲ್ಲಾ ಕಡೆಯಿಂದಲೂ ಒಟ್ಟುಗೂಡಿಸಿ ಸ್ವದೇಶಕ್ಕೆ ಕರತಂದು
Kannada Bible (KNCL) BSI 2016
ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.