Ezekiel 37:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಇನ್ನು ಮೇಲೆ ವಿಗ್ರಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸುವೆನು. ನಾನು ಅವರನ್ನು ತೊಳೆದು ಶುದ್ಧಮಾಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Kannada BSI Bible 2016
ಇಲ್ಲವೆ ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ಅಸಹ್ಯಗಳಿಂದಲೂ ಎಲ್ಲಾ ಅಕ್ರಮಗಳಿಂದಲೂ ಅಶುದ್ಧವಾಗುವದಿಲ್ಲ; ಆದರೆ ನಾನು ಅವರನ್ನು ಪಾಪಮಾಡಿದವರ ಎಲ್ಲಾ ನಿವಾಸಿ ಗಳಿಂದ ರಕ್ಷಿಸಿ, ಅವರನ್ನು ಶುದ್ಧಮಾಡುವೆನು; ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ಬೊಂಬೆಗಳಿಂದಾಗಲಿ ಅಸಹ್ಯ ವಸ್ತುಗಳಿಂದಾಗಲಿ ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಹೊಲೆಗೆಯ್ದುಕೊಳ್ಳರು; ಅವರು ಪಾಪಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Kannada Bible (KNCL) BSI 2016
ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.