Ezekiel 37:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘“ನನ್ನ ಸೇವಕನಾದ ದಾವೀದನು ಅವರ ರಾಜನಾಗುವನು. ಅವರೆಲ್ಲರಿಗೆ ಒಬ್ಬನೇ ಕುರುಘನಿರುವನು. ನಾನು ಹೇಳಿದ ಮಾತುಗಳಿಗೆ ಅವರು ವಿಧೇಯರಾಗುವರು; ನನ್ನ ಕಟ್ಟಳೆ ನಿಯಮಗಳಲ್ಲಿ ಅವರು ಬಾಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು ಮತ್ತು ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
Kannada BSI Bible 2016
ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು; ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು ನನ್ನ ನ್ಯಾಯನಿಯಮ ಗಳನ್ನೇ ಅನುಸರಿಸುವಂತೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸೇವಕನಾದ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗೂ ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
Kannada Bible (KNCL) BSI 2016
ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.