Ezekiel 37:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ನನ್ನ ಸೇವಕನಾದ ಯಾಕೋಘನಿಗೆ ಕೊಟ್ಟಿರುವ ದೇಶದಲ್ಲಿ ಅವರು ವಾಸಿಸುವರು. ನಿಮ್ಮ ಪೂರ್ವಿಕರು ಆ ಪ್ರಾಂತ್ಯದಲ್ಲಿ ವಾಸವಾಗಿದ್ದರು. ನನ್ನ ಜನರು ಅಲ್ಲಿಯೇ ವಾಸಮಾಡುವರು. ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಅಲ್ಲಿ ನಿತ್ಯಕಾಲಕ್ಕೂ ಜೀವಿಸುವರು. ನನ್ನ ಸೇವಕನಾದ ದಾವೀದನು ಅವರ ನಿತ್ಯಕಾಲದ ರಾಜನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪೂರ್ವಿಕರು ವಾಸಿಸಿದ ದೇಶದಲ್ಲಿ ಅವರೂ ಮತ್ತು ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು. ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಅರಸನಾಗಿರುವನು.
Kannada BSI Bible 2016
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ತಂದೆಗಳು(ಪಿತೃಗಳು) ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮಕ್ಕಳ ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ಪ್ರಧಾನನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.
Kannada Bible (KNCL) BSI 2016
ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.