Ezekiel 37:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಮಾಧಾನದ ಒಡಂಘಡಿಕೆಯನ್ನು ಅವರ ಜೊತೆ ಮಾಡುವೆನು. ಇದು ನಿರಂತರದ ಒಡಂಘಡಿಕೆಯಾಗಿರುವದು. ನಾನು ಅವರ ಸಬದೇಶವನ್ನು ಹಿಂತಿರುಗಿಸಿ ಕೊಡುವೆನು. ಅವರನ್ನು ಅಭಿವೃದ್ಧಿಪಡಿಸಿ ಹೆಚ್ಚಿಸುವೆನು ಮತ್ತು ಅವರ ಮಧ್ಯೆ ನನ್ನ ಪವಿತ್ರ ಸ್ಥಳವನ್ನು ಇರಿಸುವೆನು. ಇದು ನಿರಂತರವಾದ ಒಡಂಘಡಿಕೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
Kannada BSI Bible 2016
ಇದಾದ ಮೇಲೆ ನಾನು ಅವರೊಂದಿಗೆ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿ ರುವದು; ನಾನು ಅವರನ್ನು ಆ ಸ್ಥಳದಲ್ಲಿರಿಸುವೆನು ಅವರನ್ನು ವೃದ್ಧಿಗೊಳಿಸುವೆನು; ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವದು; ನಾನು ಅವರನ್ನು ನೆಲೆಗೊಳಿಸಿ ವೃದ್ಧಿಮಾಡಿ ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
Kannada Bible (KNCL) BSI 2016
ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.