Ezekiel 37:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇತರ ದೇಶಗಳವರು ನಾನು ಯೆಹೋವನೆಂದು ತಿಳಿಯುವರು. ಇಸ್ರೇಲರನ್ನು ನನ್ನ ವಿಶೇಷ ಜನರೆಂದು ಅವರಿಗೆ ತಿಳಿದುಬರುವದು. ಯಾಕೆಂದರೆ ಅವರ ಮಧ್ಯೆ ನನ್ನ ಪರಿಶುದ್ಧ ಸ್ಥಾನವನ್ನು ನಿರಂತರಕ್ಕೂ ಇರಿಸುವೆನು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರುವಾಗ ಯೆಹೋವನಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಅನ್ಯಜನಾಂಗದವರು ತಿಳಿದುಕೊಳ್ಳುವರು.”
Kannada BSI Bible 2016
ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಕರ್ತ ನಾದ ನಾನೇ ಇಸ್ರಾಯೇಲ್ಯರನ್ನು ಪರಿಶುದ್ಧ ಗೊಳಿಸಿದೆನೆಂದು ಅನ್ಯಜನರು ತಿಳಿದುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಪವಿತ್ರಾಲಯವು ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಾಯೇಲನ್ನು ಮೀಸಲು ಮಾಡಿಕೊಂಡಾತನು ಯೆಹೋವನಾದ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವದು.
Kannada Bible (KNCL) BSI 2016
ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”