Ezekiel 37:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನನ್ನ ಒಡೆಯನಾದ ಯೆಹೋವನು ನನೊಐಡನೆ ಹೀಗೆ ಹೇಳಿದನು, “ನರಪುತ್ರನೇ, ಈ ಎಲುಬುಗಳಿಗೆ ತಿರುಗಿ ಜೀವ ಘಂದೀತೋ?” ಅದಕ್ಕೆ ನಾನು, “ನನ್ನ ಒಡೆಯನಾದ ಯೆಹೋವನೇ, ನೀನೇ ಘಲ್ಲೆ. ಈ ಪ್ರಶೆಐಗೆ ಉತ್ತರ ನಿನಗೇ ಗೊತ್ತಿದೆ” ಎಂದು ಉತ್ತರಿಸಿದೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.
Kannada BSI Bible 2016
ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ನನ್ನನ್ನು - ನರಪುತ್ರನೇ, ಈ ಎಲುಬುಗಳಿಗೆ ಜೀವವು ಬರಬಹುದೋ ಎಂದು ಕೇಳಲು ನಾನು - ಕರ್ತನಾದ ಯೆಹೋವನೇ, ನೀನೇ ಬಲ್ಲೆ ಎಂದುತ್ತರಕೊಟ್ಟೆನು.
Kannada Bible (KNCL) BSI 2016
ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.