Ezekiel 37:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಎಲುಬುಗಳೊಂದಿಗೆ ಯೆಹೋವನ ಪರವಾಗಿ ಮಾತನಾಡಿದೆನು. ನಾನು ಮಾತನಾಡುತ್ತಾ ಇರುವಾಗಲೇ ಒಂದು ದೊಡ್ಡ ಶಘ್ದವನ್ನು ಕೇಳಿದೆನು. ಎಲುಬುಗಳು ಅಲ್ಲಾಡತೊಡಗಿದವು ಮತ್ತು ಒಂದಕ್ಕೊಂದು ಜೋಡಿಸಲ್ಪಟ್ಟವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನಗೆ ಅಪ್ಪಣೆಯಾದಂತೆ ನಾನು ಆ ಪ್ರವಾದನೆಯನ್ನು ನುಡಿಯುತ್ತಿರಲು, ಅಲ್ಲಿ ಟಕಟಕ ಶಬ್ದವಾಯಿತು, ಇಗೋ, ಅದು ಕದಲುತ್ತಿತ್ತು. ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಜೋಡಣೆಯಾದವು.
Kannada BSI Bible 2016
ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನಗೆ ಅಪ್ಪಣೆಯಾದಂತೆ ನಾನು ಆ ದೈವೋಕ್ತಿಯನ್ನೆತ್ತಿ ನುಡಿಯುತ್ತಿರಲು ಸದ್ದಾಯಿತು, ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ ಜೋಡನೆಯಾದವು.
Kannada Bible (KNCL) BSI 2016
ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.