Ezekiel 37:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನ ಕಣ್ಣೆದುರಿನಲ್ಲೇ ಅವುಗಳಿಗೆ ಸಾಐಯುಗಳು, ನರಗಳು ಘಂದವು; ಮತ್ತು ಚರ್ವವು ಅವುಗಳನ್ನು ಮುಚ್ಚಿತು. ಆದರೆ ಆ ಶರೀರ ಚಲಿಸಲಿಲ್ಲ. ಯಾಕೆಂದರೆ ಅದರಲ್ಲಿ ಶ್ವಾಸವಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನೋಡುತ್ತಿರುವಾಗ ಏನಾಶ್ಚರ್ಯ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು, ಶ್ವಾಸ ಮಾತ್ರ ಇರಲಿಲ್ಲ.
Kannada BSI Bible 2016
ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನೋಡಲಾಗಿ ಆಹಾ, ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲ್ಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ.
Kannada Bible (KNCL) BSI 2016
ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.